ಹಾಸನ, ನವೆಂಬರ್ 2: ಹಾಸನದಲ್ಲಿ ನಡೆಯುತ್ತಿರುವ ಐತಿಹಾಸಿಕ ಹಾಸನಾಂಬೆ ದರ್ಶನೋತ್ಸವದ ಹಿನ್ನೆಲೆಯಲ್ಲಿ, ಇದೇ ಮೊದಲ ಬಾರಿಗೆ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ ಕ್ರೀಡಾಕೂಟಕ್ಕೆ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡರು ಅಖಾಡಕ್ಕಿಳಿದು ವೈಶಿಷ್ಟ್ಯಪೂರ್ಣವಾಗಿ ಚಾಲನೆ ನೀಡಿದರು. ಸಚಿವರು ಸ್ವತಃ ರೈಡರ್ ಆಗಿ ಕಬಡ್ಡಿ ಕಣಕ್ಕಿಳಿದು, ಕ್ರೀಡಾಪಟುಗಳಿಗೆ ಮತ್ತು ಸಾರ್ವಜನಿಕರಿಗೆ ಸ್ಫೂರ್ತಿ ತುಂಬಿದರು. ಸಚಿವರ ಈ ಸಾಹಸಕ್ಕೆ ನೆರೆದಿದ್ದ ಜನಸ್ತೋಮ ಸಿಳ್ಳೆ ಹಾಗೂ ಚಪ್ಪಾಳೆಗಳ ಮೂಲಕ ಅಭೂತಪೂರ್ವ ಬೆಂಬಲ ಸೂಚಿಸಿತು. ಜಿಲ್ಲಾಧಿಕಾರಿ ಲತಾಕುಮಾರಿ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಾಸನಾಂಬೆ ದರ್ಶನೋತ್ಸವದ ಇತಿಹಾಸದಲ್ಲೇ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸಿರುವುದು ಇದೇ ಮೊದಲು. ಈ ಕಬಡ್ಡಿ ಪಂದ್ಯಾವಳಿಯು ಜಾತ್ರೆಯ ಸಡಗರಕ್ಕೆ ಮತ್ತಷ್ಟು ಮೆರುಗು ನೀಡಿದೆ. ಕ್ರೀಡಾ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಸಚಿವರ ಈ ಕಾರ್ಯ ಶ್ಲಾಘನೀಯವಾಗಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ