ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಮನೆಯಲ್ಲಿ ಒಂದಾದ ಮತ್ತೊಂದು ಜೋಡಿ ಈಗ ಹೊಸ ಬಾಳಿಗೆ ಕಾಲಿಡಲು ಸಂಪೂರ್ಣವಾಗಿ ಸಜ್ಜಾಗಿದೆ. ಹೌದು, ನಟ ಶಿಶಿರ್ ಶಾಸ್ತ್ರಿ ಹಾಗೂ ನಟಿ ಐಶ್ವರ್ಯಾ ಶಿಂಧೋಗಿ ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿರುವುದಾಗಿ ಅಧಿಕೃತವಾಗಿ ತಿಳಿಸಿದ್ದು, ಕಿರುತೆರೆ ಅಂಗಳದಲ್ಲಿ ಸಂಭ್ರಮದ ವಾತಾವರಣ ಮನೆಮಾಡಿದೆ.

ಬಿಗ್ ಬಾಸ್ ಮನೆಯಲ್ಲಾದ ಪರಿಚಯ

ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದ ವೇಳೆ ಇವರಿಬ್ಬರ ನಡುವೆ ಮೊದಲ ಬಾರಿಗೆ ಪರಿಚಯವಾಗಿತ್ತು. ಶೋನಲ್ಲಿ ಇವರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಶೋ ಮುಗಿದ ನಂತರವೂ ಇವರ ಬಾಂಧವ್ಯ ಮುಂದುವರಿದು, ಕಾಲಕ್ರಮೇಣ ಗಾಢವಾದ ಸ್ನೇಹ ಪ್ರೀತಿಯಾಗಿ ಬದಲಾಗಿತ್ತು. ಕಳೆದ ಕೆಲವು ಸಮಯದಿಂದ ಈ ಜೋಡಿ ವಿವಿಧ ಸಮಾರಂಭಗಳಲ್ಲಿ, ಪ್ರವಾಸಗಳಲ್ಲಿ ಸದಾ ಒಟ್ಟಿಗೆ ಸುತ್ತಾಡುತ್ತಾ ಕಾಣಿಸಿಕೊಳ್ಳುತ್ತಿತ್ತು. ಇದರಿಂದಾಗಿ ಇವರ ನಡುವೆ ಪ್ರೀತಿ ಇದೆ ಎಂಬ ವದಂತಿಗಳು ಬಲವಾಗಿದ್ದರೂ, ಇಬ್ಬರೂ ಈ ವಿಷಯವನ್ನು ಎಲ್ಲೂ ಅಧಿಕೃತವಾಗಿ ಬಿಟ್ಟುಕೊಟ್ಟಿರಲಿಲ್ಲ.

View this post on Instagram

A post shared by Aishwarya Shindogi (@aishwaryashindogi_official)

ಶೀಘ್ರದಲ್ಲೇ ಶುಭಕಾರ್ಯ

ಇದೀಗ ತಮ್ಮ ನಡುವಿನ ಪ್ರೀತಿಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಿರುವ ಈ ಮುದ್ದಾದ ಜೋಡಿ, ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿ ಅಭಿಮಾನಿಗಳಿಗೆ ಬಿಗ್ ಸರ್‌ಪ್ರೈಸ್ ನೀಡಿದ್ದಾರೆ. ಇಬ್ಬರ ಕುಟುಂಬದ ಹಿರಿಯರು ಹಾಗೂ ಆಪ್ತ ಗೆಳೆಯರ ಸಮ್ಮುಖದಲ್ಲಿ ಈ ನಿಶ್ಚಿತಾರ್ಥ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಲಿದೆ. ಇವರಿಬ್ಬರೂ ಬೇರೆ ಆಗ್ತಾರೆ ಎಂದೆಲ್ಲ ಟ್ರೋಲ್ ಮಾಡಿದವರಿಗೂ ಹಂಚಿಕೊಮಡ ವಿಡಿಯೋದಲ್ಲಿ ಖಡಕ್ ಆಗಿ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಮಗಳ ಧ್ವನಿ ಕೇಳಿ ಕಣ್ಣೀರು ಹಾಕಿದ ಜಗದೀಶ್

ಕಿರುತೆರೆಯಲ್ಲಿ ತಮ್ಮದೇ ಆದ ಜನಪ್ರಿಯತೆ ಗಳಿಸಿರುವ ಈ ಜೋಡಿ ರಿಯಲ್ ಲೈಫ್‌ನಲ್ಲೂ ಒಂದಾಗುತ್ತಿರುವುದಕ್ಕೆ ಅಭಿಮಾನಿಗಳು ಹಾಗೂ ಕಿರುತೆರೆ ಬಳಗ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.