Breaking News Today Live Updates in Kannada: ರಾಜ್ಯ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಸಾವಿರಾರು ರೈತರು ಇಂದು ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಬೆಳಗಾವಿಯಲ್ಲಿ ನಿಗದಿಪಡಿಸಿದ ಕಬ್ಬಿನ ದರವನ್ನು ವಿರೋಧಿಸಿರುವ ರೈತರು, ರಾಜ್ಯ ಸರ್ಕಾರ ಕಬ್ಬಿಗೆ ನ್ಯಾಯಯುತ ಎಸ್‌ಎಪಿ ದರ ಹಾಗೂ ಕೇಂದ್ರ ಸರ್ಕಾರ ಎಫ್‌ಆರ್‌ಪಿ ದರ ಹೆಚ್ಚಿಸಬೇಕು, ಸಂಪೂರ್ಣ ಸಾಲಮನ್ನಾ ಮಾಡಬೇಕು ಮತ್ತು ಎಕರೆಗೆ ₹25,000 ಬರ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ. ಇನ್ನೊಂದೆಡೆ, ಕೌಟುಂಬಿಕ ದ್ವೇಷಕ್ಕೆ ರಾಜಾಜಿನಗರದ ಕ್ಯಾಬ್ ಚಾಲಕ ಇಂದುಶೇಖರ್ ತನ್ನ ಪತ್ನಿ ಸುನೀತಾ ಹಾಗೂ ಆಕೆಯ ಕುಟುಂಬದ ಏಳು ಮಂದಿಯನ್ನು ರುಬ್ಬುಗುಂಡಿನಿಂದ ಹೊಡೆದು ಹತ್ಯೆಗೈದ ಭೀಕರ ಘಟನೆ ಬೆಳಕಿಗೆ ಬಂದಿದೆ. ಶ್ರೀರಾಮಪುರ ಠಾಣೆಯಲ್ಲಿ ದಾಖಲಾದ ನಾಪತ್ತೆ ದೂರಿನ ತನಿಖೆ ವೇಳೆ ಈ ಘಟನೆ ಬಯಲಾಗಿದ್ದು, ರಾಜಾಜಿನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನಂದಿಬೆಟ್ಟದ ಬಳಿ ಬಾಲಕ ಪುನೀತ್‌ನ ಶವ ಸಿಕ್ಕಿದ್ದು, ಉಳಿದ ಶವಗಳಿಗಾಗಿ ಶೋಧ ಮುಂದುವರಿದಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಬೆಂಗಳೂರು, ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

LIVE TV