ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡು ಕಂಡ ಅಪರೂಪದ ಮುತ್ಸದ್ದಿ. ಅವರ ಚಾರಿತ್ರ್ಯಹರಣ ಮಾಡಲು ನಡೆದಿರುವ ಸಂಚು ತೀವ್ರ ಖಂಡನೀಯ ಎಂದು ರಾಜ್ಯ ಕಾಯಕ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕೆ.ಸಿ.ಪುಟ್ಟಸಿದ್ದಶೆಟ್ಟಿ ಹೇಳಿದರು.

ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ಮೇಲೆ ಸ್ಟಿಂಗ್ ಆಪರೇಷನ್ ಸದ್ದು ಮಾಡುತ್ತಿರುವುದು ಏಕೆ? ಇದರ ಹಿಂದೆ ಇರುವವರು ಯಾರು ಎಂಬುದು ಬಹಿರಂಗೊಳ್ಳಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ದಸರಾ ಬಗ್ಗೆ ನೀಡಿರುವ ಹೇಳಿಕೆ ಕಾನೂನುಬದ್ಧವಾಗಿಯೇ ಇದೆ. ಜಯಚಾಮರಾಜೇಂದ್ರ ಒಡೆಯರ್ ಅವರು ಸರ್ಕಾರದ ಜೊತೆ ಮಾಡಿಕೊಂಡ ಒಪ್ಪಂದದಂತೆ ಅರಮನೆಯು ಸರ್ಕಾರಕ್ಕೆ ಸೇರಿದೆ ಎಂದರು.

ಸಂಘಟನಾ ಕಾರ್ಯದರ್ಶಿ ಕುಮಾರಶೆಟ್ಟಿ, ಗ್ರಾಮಾಂತರ ಘಟಕದ ಅಧ್ಯಕ್ಷ ರಮೇಶ್ ಇದ್ದರು.

261106-37-1696582356