ಬೆಂಗಳೂರು: ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ರಾಜ್ಯ ಆಯುಕ್ತರ ನೇಮಕಾತಿಗೆ ಸಂಬಂಧಿಸಿ ರೂಪಿಸಿರುವ ನಿಯಮಗಳನ್ನು ಉಲ್ಲಂಘಿಸಿ ಆಯುಕ್ತರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ವಿಕಲಚೇತನ ರಕ್ಷಣಾ ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಶೇಖರ ಪುಟ್ಟಪ್ಪ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಸರ್ಕಾರವೇ ರೂಪಿಸಿರುವ ಅಂಗವಿಕಲರ ಹಕ್ಕುಗಳ ಕಾಯ್ದೆ 2016ರ ನಿಯಮಗಳು ಪಾಲನೆಯಾಗಿಲ್ಲ. ಅಂಗವಿಕಲರ ಕ್ಷೇತ್ರದಲ್ಲಿ ಅನುಭವ, ಪರಿಚಯವೇ ಇಲ್ಲದ ವ್ಯಕ್ತಿಯನ್ನು ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ನಿಯಮಬಾಹಿರವಾದ ಈ ನೇಮಕವನ್ನು ಕೂಡಲೇ ರದ್ದುಪಡಿಸಿ, ಅಂಗವಿಕಲರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಹ ವ್ಯಕ್ತಿಯನ್ನು ಆಯುಕ್ತರನ್ನಾಗಿ ನೇಮಕ ಮಾಡಬೇಕು’ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
‘ಸುಮಾರು 50 ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ನಿಯಮದಂತೆ ಉಪ ಸಮಿತಿಯು ಈ ಅರ್ಜಿಗಳನ್ನು ಪರಿಶೀಲಿಸಿ ಅರ್ಹರ ಪಟ್ಟಿಯನ್ನು ಶೋಧನಾ ಸಮಿತಿಗೆ ನೀಡಬೇಕು. ಆ ಸಮಿತಿ ಸಂದರ್ಶನ ನಡೆಸಿ, ಮೂವರು ಅಭ್ಯರ್ಥಿಗಳ ಪಟ್ಟಿಯನ್ನು ಮುಖ್ಯಮಂತ್ರಿಗೆ ಸಲ್ಲಿಸಬೇಕು. ಅವರ ಆದೇಶದಂತೆ ಒಬ್ಬರನ್ನು ಆಯ್ಕೆ ಮಾಡಬೇಕಿತ್ತು. ಆದರೆ, ನಿಯಮ ಉಲ್ಲಂಘಿಸಿ, ಡಾ. ವೆಂಕಟರಮಣಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ ಎಂದು ದೂರಿದ್ದಾರೆ.
261106-4-1636891082

