ಬೆಂಗಳೂರು: ‘ಪ್ರತಿಯೊಬ್ಬ ವ್ಯಕ್ತಿಗೆ ಶುದ್ಧ ಮತ್ತು ಸಮರ್ಪಕ ಕುಡಿಯುವ ನೀರು ಪೂರೈಸುವುದು ಸರ್ಕಾರದ ಮಹತ್ತರ ಜವಾಬ್ದಾರಿ’ ಎಂದು ಹೈಕೋರ್ಟ್ ಹೇಳಿದೆ.

‘ಹೈಕೋರ್ಟ್‌ 2025ರ ಮೇ 28ರಂದು ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ಪಾಲನೆ ಮಾಡಿಲ್ಲ’ ಎಂದು ದೂರಿ ವಕೀಲ ರಮೇಶ್ ನಾಯಕ್ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ ನೇತೃತ್ವದ ದ್ವಿಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ‘ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಯ ಎಲ್ಲಾ 31 ಜಿಲ್ಲೆಗಳಿಂದ ಮಾಹಿತಿ ಬಂದಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ 25 ಸಾವಿರಕ್ಕೂ ಅಧಿಕ ಗ್ರಾಮಗಳಿದ್ದು, ಹಲವು ಗ್ರಾಮಗಳಿಂದ ಇನ್ನೂ ಮಾಹಿತಿ ತರಿಸಿಕೊಳ್ಳಬೇಕಾಗಿದೆ. ಇದಕ್ಕಾಗಿ 3 ವಾರ ಕಾಲಾವಕಾಶ ನೀಡಬೇಕು’ ಎಂದು ಕೋರಿದರು. ನ್ಯಾಯಾಲಯದ ಆದೇಶದ ಅನುಸಾರ ಕೈಗೊಂಡಿರುವ ಅನುಪಾಲನಾ ವರದಿಯನ್ನು ಪೀಠಕ್ಕೆ ಸಲ್ಲಿಸಿದರು.

ಇದನ್ನು ದಾಖಲಿಸಿಕೊಂಡ ಪೀಠ, ‘ನ್ಯಾಯಾಲಯದಿಂದಲೇ ಒಬ್ಬ ವಕೀಲರನ್ನು ಅಮಿಕಸ್ ಕ್ಯೂರಿಯನ್ನಾಗಿ ನೇಮಿಸಲಾ ಗುವುದು. ಅವರು ಪರಿಣತರ ತಂಡ ದೊಂದಿಗೆ ಸ್ಥಳಕ್ಕೆ ಭೇಟಿ ಕೊಟ್ಟು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿ ವಾಸ್ತವ ಸಂಗತಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಿ’ ಎಂದು ತಿಳಿಸಿ ವಿಚಾರಣೆ ಮುಂದೂಡಿತು.

261106-51-1609145941