ಬೆಂಗಳೂರು: ಸಿದ್ದರಾಮಯ್ಯ ದೆಹಲಿ ಭೇಟಿ ಮುಗಿಸಿ ವಾಪಸ್ ಬಂದ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ದೆಹಲಿಗೆ ತೆರಳುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಅವರ ಈ ಪ್ರವಾಸದಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ಪುನರ್‌ರಚನೆ ಮತ್ತು ರಾಜಕೀಯ ಬೆಳವಣಿಗೆಗಳ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

ದೆಹಲಿಯಲ್ಲಿ ಕೇಂದ್ರದ ಸಚಿವರನ್ನು ಮುಖ್ಯಮಂತ್ರಿ ಭೇಟಿ ಮಾಡಲಿದ್ದಾರೆ. ಅಲ್ಲದೆ, ಅವರು, ರಾಜ್ಯ ಕಾಂಗ್ರೆಸ್‌ನ ಹಲವು ಪ್ರಮುಖ ವಿಚಾರಗಳಿಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ನಾಯಕರೊಂದಿಗೂ ಮಾತುಕತೆ ನಡೆಸುವ ನಿರೀಕ್ಷೆಯಿದೆ. ಅದರಲ್ಲೂ ಖಾಲಿ ಇರುವ ಸಚಿವ ಸ್ಥಾನಗಳ ಭರ್ತಿ ವಿಚಾರ ಪ್ರಮುಖವಾಗಿ ಪ್ರಸ್ತಾಪ ಆಗಬಹುದು ಎಂದು ಹೇಳಲಾಗುತ್ತಿದೆ. ಶನಿವಾರ ಬೆಳಗ್ಗಿನ ವಿಮಾನದಲ್ಲಿ ಮುಖ್ಯಮಂತ್ರಿ ಬೆಂಗಳೂರಿಗೆ ವಾಪಸಾಗಲಿದ್ದಾರೆ.

261106-4-269008401