ನವದೆಹಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ದೀಪಾವಳಿ ಹಬ್ಬಕ್ಕೆ ಮುನ್ನ ಆಯೋಜಿಸಿದ್ದ ದೀಪಾವಳಿ ಮಿಲನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ದೆಹಲಿಯ ಸುನೇಹರಿ ಬಾಗ್ ರೋಡ್ ನಿವಾಸದಲ್ಲಿ ಆಯೋಜಿಸಿದ್ದ ಚಹಾ ಕೂಟದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ, ಜೈರಾಮ್ ರಮೇಶ್, ಸಚಿನ್ ಪೈಲಟ್, ಕುಮಾರಿ ಸೆಲ್ಜಾ, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು, ಮಾಜಿ ಮುಖ್ಯ ಮಂತ್ರಿಗಳಾದ ಭೂಪೇಂದರ್ ಸಿಂಗ್ ಹೂಡಾ, ಭೂಪೇಶ್ ಬಘೇಲ್, ಅಶೋಕ್ ಗೆಹಲೋಟ್, ಹರೀಶ್ ರಾವತ್ ಮತ್ತು ದಿಗ್ವಿಜಯ್ ಸಿಂಗ್, ವಿವಿಧ ರಾಜ್ಯಗಳ ಉಸ್ತು ವಾರಿಗಳು ಹಾಗೂ ಚುನಾವಣೆ ಎದುರಿಸಲಿರುವ ರಾಜ್ಯಗಳ ಹಲವು ನಾಯಕರು ಸಹ ಭಾಗವಹಿಸಿದ್ದರು .

ಕಾಂಗ್ರೆಸ್‌ಗೆ ನಿಷ್ಠೆಯಿಂದ ದುಡಿಯುತ್ತಿರುವ ಪಕ್ಷದ ಪದಾಧಿಕಾರಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯಕರ್ತರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೀಪಾವಳಿ ಶುಭಾಶಯಗಳನ್ನು ಕೋರಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸಭೆಯಲ್ಲಿ ಒಗ್ಗಟ್ಟು, ಪ್ರೀತಿ ಮತ್ತು ಶಾಂತಿಯ ಸಂದೇಶಗಳನ್ನು… pic.twitter.com/WQC3kniBlL

— kannadaprabha (@KannadaPrabha) November 7, 2026

ಈ ಸಭೆಗೆ ಯಾವುದೇ ಅಧಿಕೃತ ಕಾರ್ಯಸೂಚಿ ಇರಲಿಲ್ಲವಾದರೂ, ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಒಕ್ಕೂಟದ ರ್ಯಾಲಿಯ ಅನಂತರ "ವೋಟ್ ಚೋರಿ' ವಿಷಯದ ಕುರಿತು ಪಕ್ಷದ ಅಭಿಯಾನವನ್ನು ಮುಂದಕ್ಕೆ ಕೊಂಡೊಯ್ಯುವ ಕ್ರಮಗಳ ಬಗ್ಗೆ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಡಿಸೆಂಬರ್ 2 ಬೆಳಗಾವಿ ಅಧಿವೇಶನಕ್ಕೆ ಮುನ್ನ ಮಹಿಳೆಗೆ ಸಚಿವ ಸ್ಥಾನ: ಸಿಎಂ ಡಿಕೆ ಶಿವಕುಮಾರ್; Video