ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಶುರುವಾಗಿದೆ. ವೆಲ್ಲಿಂಗ್ಟನ್ ನ ಹೆನ್ರಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಸರಣಿಯ ಮೊದಲ ಮ್ಯಾಚ್ ನಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ಶುಭ್ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ನ್ಯೂಝಿಲೆಂಡ್ ಮೊದಲು ಬ್ಯಾಟ್ ಮಾಡಲಿದೆ.
ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಯಾವುದೇ ಬದಲಾವಣೆ ಮಾಡದೆ, ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಆಡುವ ಬಳಗವನ್ನೇ ಮುಂದುವರಿಸಿದೆ. ಪರಿಣಾಮವಾಗಿ, ಈ ಪಂದ್ಯದಿಂದಲೂ ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್ ಹೊರಗುಳಿಯಬೇಕಾಗಿ ಬಂದಿದೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…”
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ, ಶುಭ್ಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ನಮನ್ ಧೀರ್, ಅನ್ಶುಲ್ ಕಂಬೋಜ್, ಆಕಿಬ್ ನಬಿ, ಗುರ್ನೂರ್ ಬ್ರಾರ್, ಅರ್ಷದೀಪ್ ಸಿಂಗ್.
ನ್ಯೂಝಿಲೆಂಡ್ (ಪ್ಲೇಯಿಂಗ್ XI): ವಿಲ್ ಯಂಗ್, ಟಿಮ್ ಸೈಫರ್ಟ್, ಹೆನ್ರಿ ನಿಕೋಲ್ಸ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್ (ನಾಯಯಕ), ನಾಥನ್ ಸ್ಮಿತ್, ಕೈಲ್ ಜೇಮಿಸನ್, ಜೇಕಬ್ ಡಫಿ, ಬ್ಲೇರ್ ಟಿಕ್ನರ್.
ಇಂಡೊ-ಕಿವೀಸ್ ಮುಖಾಮುಖಿ:
ಭಾರತ ಮತ್ತು ನ್ಯೂಝಿಲೆಂಡ್ ಏಕದಿನ ಕ್ರಿಕೆಟ್ ನಲ್ಲಿ ಈವರೆಗೆ 124 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 64 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 52 ಮ್ಯಾಚ್ ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ 7 ಪಂದ್ಯಗಳು ಕಾರಣಾಂತರದಿಂದ ರದ್ದಾದರೆ, ಒಂದು ಮ್ಯಾಚ್ ಟೈನಲ್ಲಿ ಅಂತ್ಯಗೊಂಡಿತ್ತು.
ಭಾರತದ ಏಕದಿನ ತಂಡ (ಮೊದಲ 3 ಪಂದ್ಯಗಳಿಗೆ): ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ನಮನ್ ಧೀರ್, ಅನ್ಶುಲ್ ಕಂಬೋಜ್, ಗುರ್ನೂರ್ ಬ್ರಾರ್, ರುತುರಾಜ್ ಗಾಯಕ್ವಾಡ್, ಅರ್ಷದೀಪ್ ಸಿಂಗ್, ಇಶಾನ್ ಕಿಶನ್, ಮೊಹಮ್ಮದ್ ಸಿರಾಜ್, ಆಖಿಬ್ ನಬಿ, ಕುಲ್ದೀಪ್ ಯಾದವ್.
ಇದನ್ನೂ ಓದಿ: 17 ವರ್ಷಗಳ ದಾಖಲೆ ಪತನ… ಟೀಮ್ ಇಂಡಿಯಾಗೆ ಮುಖಭಂಗ!
ನ್ಯೂಝಿಲೆಂಡ್ ಏಕದಿನ ತಂಡ (ಮೊದಲ 3 ಪಂದ್ಯಗಳಿಗೆ): ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್ವೆಲ್, ಡೆವೊನ್ ಕಾನ್ವೇ, ಜೇಕಬ್ ಡಫಿ, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಟಿಮ್ ಸೈಫರ್ಟ್, ನಾಥನ್ ಸ್ಮಿತ್, ವಿಲ್ ಯಂಗ್, ಬ್ಲೇರ್ ಟಿಕ್ನರ್.

