ಬೆಂಗಳೂರು: ‘ರಾಜ್ಯದ ಜವಳಿ ಕ್ಷೇತ್ರದಲ್ಲಿ ಹೂಡಿಕೆ, ಉದ್ಯೋಗ ಸೃಷ್ಟಿ ಮತ್ತು ಸಮತೋಲಿತ ಪ್ರಾದೇಶಿಕ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿರುವ ‘ಕರ್ನಾಟಕ ಜವಳಿ ಮತ್ತು ಉಡುಪು ನೀತಿ 4.0’ಯನ್ನು (2026–31) ಶೀಘ್ರವೇ ಬಿಡುಗಡೆ ಮಾಡಲಾಗುವುದು’ ಎಂದು ಜವಳಿ ಸಚಿವ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.

ಕೈಮಗ್ಗ ಮತ್ತು ಜವಳಿ ಇಲಾಖೆಯ ಯೋಜನೆಗಳು ಹಾಗೂ ವಿವಿಧ ನಿಗಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೂತನ ಜವಳಿ ನೀತಿಯಲ್ಲಿ ರಾಜ್ಯದ ವಿವಿಧ ಭಾಗಗಳಿಗೆ ಹೂಡಿಕೆ ಮತ್ತು ಉದ್ಯೋಗಾವಕಾಶಗಳನ್ನು ವಿಸ್ತರಿಸುವ ಹಲವು ಹೊಸ ಕ್ರಮಗಳನ್ನು ಅಳವಡಿಸಲಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಶೇಷ ಮುತುವರ್ಜಿ ವಹಿಸಿ ನೂತನ ಜವಳಿ ನೀತಿಯಲ್ಲಿ ಹಲವು ಹೊಸ ಅಂಶಗಳನ್ನೂ ಸೇರಿಸಿದ್ದಾರೆ. ಬೆಂಗಳೂರು ಸೇರಿ ಈಗಾಗಲೇ ಅಭಿವೃದ್ಧಿ ಹೊಂದಿರುವ ಪ್ರದೇಶಗಳಿಗೆ ಮಾತ್ರ ಸೀಮಿತವಾಗದೆ, ರಾಜ್ಯದ ಇತರ ಭಾಗಗಳಿಗೂ ಜವಳಿ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯನ್ನು ವಿಸ್ತರಿಸುವುದು ಈ ನೀತಿಯ ಮುಖ್ಯ ಉದ್ದೇಶವಾಗಿದೆ. ರೇಷ್ಮೆ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

261107-4-1481142648