ಮೈಸೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು (ಬುಧವಾರ) ಮೈಸೂರು ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಬೆಳಿಗ್ಗೆ 10.30ಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯುವ ಅವರು, ಬೆಳಿಗ್ಗೆ 10.55ಕ್ಕೆ ಜೆಎಸ್ಎಸ್ ಕಲಾ ಕಾಲೇಜಿನಲ್ಲಿ ಆಯೋಜಿಸಿರುವ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರ ವಿಶ್ವಸಂಸ್ಕೃತಿ ಮಹಾಯಾನ ಸಂಪುಟ-4ರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸಂಜೆ 4ಕ್ಕೆ ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರಮ್ಯಾ ವೈ.ಎನ್. ಅವರ ಚಲಿಸುವ ಬಂಡೆ ಕೃತಿ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 5.50ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳುವರು.
ಸಿದ್ದರಾಮಯ್ಯ ಮೈಸೂರು ಪ್ರವಾಸ ಇಂದು
ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ಅವರು ಇಂದು (ಬುಧವಾರ) ಮೈಸೂರು ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 10.40ಕ್ಕೆ ಹೆಲಿಕಾಪ್ಟರ್ನಲ್ಲಿ ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ಬಂದಿಳಿಯುವರು. ನಂತರ ಜೆಎಸ್ಎಸ್ ಕಲಾ ಕಾಲೇಜಿನಲ್ಲಿ ನಡೆಯುವ ಸಮಾರಂಭದಲ್ಲಿ ವೀರಪ್ಪ ಮೊಯಿಲಿ ಅವರ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಪಾಲ್ಗೊಳ್ಳುವರು.
ಬಳಿಕ ತಾಲ್ಲೂಕಿನ ಏಳಿಗೆಹುಂಡಿ ಗ್ರಾಮದಲ್ಲಿ ಕಾರ್ಗಳ್ಳಮ್ಮ ಮಹಾಲಕ್ಷ್ಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4.30ಕ್ಕೆ ಹೆಲಿಕಾಪ್ಟರ್ನಲ್ಲಿ ಬೆಂಗಳೂರಿಗೆ ತೆರಳುವರು.

