ಬೆಂಗಳೂರು: ಬರ ಪರಿಹಾರದ ವಿಚಾರದಲ್ಲಿ ಯಾರಿಗೂ ಗೊಂದಲ ಬೇಡ. ಅರ್ಹ ರೈತರಿಗೆಲ್ಲ ₹5,000 ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ʼರಾಜ್ಯದ ರೈತ ಬಾಂಧವರಲ್ಲಿ ಬರ ಪರಿಹಾರದ ಕುರಿತು ಯಾವುದೇ ಗೊಂದಲ ಬೇಡ. ಮೊದಲ ಕಂತಿನಲ್ಲಿ ಬಿಡುಗಡೆಯಾಗಿರುವ ಹಣವೇ ಅಂತಿಮವಲ್ಲ. ಎಸ್‌ಡಿಆರ್‌ಎಫ್ / ಎನ್‌ಡಿಆರ್‌ಎಫ್ ನಿಯಮಗಳ ಅಡಿ ಮಳೆಯಾಶ್ರಿತ, ನೀರಾವರಿ ಹಾಗೂ ಬಹುವಾರ್ಷಿಕ ಬೆಳೆಗಳಿಗೆ ಕ್ರಮವಾಗಿ ₹1,500, ₹2,600 ಮತ್ತು ₹3,200 ಕನಿಷ್ಠ ಪರಿಹಾರ ನಿಗದಿಯಾಗಿದೆ. ಆದರೆ, ರಾಜ್ಯ ಸರ್ಕಾರ ಈ ಮೂರೂ ವರ್ಗದ ಬೆಳೆಗಳಿಗೂ ಕನಿಷ್ಠ ₹5,000 ಬರ ಪರಿಹಾರ ನೀಡಲಿದೆ. ಈ ಹೆಚ್ಚುವರಿ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆʼ ಎಂದು ಭರವಸೆ ನೀಡಿದ್ದಾರೆ.
ʼಮೊದಲ ಕಂತಿನಲ್ಲಿ ₹2,000 ಅಥವಾ ₹2,500 ಪಡೆದ ರೈತರಿಗೆ ಬಾಕಿ ಹಣ ಮುಂದಿನ ಕಂತಿನಲ್ಲಿ ಪಾವತಿಯಾಗಲಿದೆ. ಅರ್ಹ ರೈತರು ಬೆಳೆ ನಷ್ಟದ ಆಧಾರದ ಮೇಲೆ ₹60,000ವರೆಗೆ ಇನ್‌ಪುಟ್ ಸಬ್ಸಿಡಿ ನೆರವನ್ನು ಪಡೆಯಬಹುದು. ರೈತರಿಗೆ ಪೂರ್ಣ ಪರಿಹಾರ ತಲುಪಿಸಲು ಸರ್ಕಾರ ಬದ್ಧವಾಗಿದ್ದು, ತಪ್ಪು ಮಾಹಿತಿ, ವದಂತಿಗಳಿಗೆ ಕಿವಿಗೊಡಬೇಡಿʼ ಎಂದು ತಿಳಿಸಿದ್ದಾರೆ.
ಸಂಕಷ್ಟದಲ್ಲಿರುವ ರೈತರಿಗೆ ಮೊದಲ ಹಂತದಲ್ಲಿ ಕನಿಷ್ಠ ₹5,000 ಬರ ಪರಿಹಾರ: ಪರಮೇಶ್ವರಬರ ಪರಿಹಾರದ ಬಗ್ಗೆ ಗೊಂದಲ ಬೇಡ; ಎಲ್ಲ ಅರ್ಹ ರೈತರಿಗೂ ₹5,000 ನೆರವು
— CM of Karnataka (@CMofKarnataka) November 10, 2026
ರಾಜ್ಯದ ರೈತ ಬಾಂಧವರಲ್ಲಿ ಬರ ಪರಿಹಾರದ ಕುರಿತು ಯಾವುದೇ ಗೊಂದಲ ಬೇಡ. ಮೊದಲ ಕಂತಿನಲ್ಲಿ ಬಿಡುಗಡೆಯಾಗಿರುವ ಹಣವೇ ಅಂತಿಮವಲ್ಲ. SDRF/NDRF ನಿಯಮಗಳಡಿ ಮಳೆಯಾಶ್ರಿತ, ನೀರಾವರಿ ಹಾಗೂ ಬಹುವಾರ್ಷಿಕ ಬೆಳೆಗಳಿಗೆ ಕ್ರಮವಾಗಿ ₹1,500, ₹2,600 ಮತ್ತು ₹3,200 ಕನಿಷ್ಠ… pic.twitter.com/gwvZFWiHXx
