‘ಮೊದಲ ಹಂತದಲ್ಲಿ ಸುಮಾರು 50 ಲಕ್ಷ ರೈತ ಕುಟುಂಬಗಳಿಗೆ ತಲಾ ₹2,500 ನೀಡುವ ಉದ್ದೇಶಕ್ಕೆ ₹1,250 ಕೋಟಿ ಬೇಕೆಂದು ಅಂದಾಜು ಮಾಡಲಾಗಿದೆ. ಎರಡನೇ ಹಂತದಲ್ಲಿಯೂ ಅಷ್ಟೇ ಮೊತ್ತವನ್ನು ಒದಗಿಸುವ ಲೆಕ್ಕಾಚಾರವಿದೆ. ರೈತರ ಒಂದು ಕುಟುಂಬಕ್ಕೆ ₹5,000 ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಆದರೆ, ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಅರ್ಹತೆ ಹೊಂದಿರಬೇಕು. ಈ ಪ್ರಕ್ರಿಯೆಯಲ್ಲಿ ಕೆಲವರು ಅನರ್ಹರಾಗುವ ಸಾಧ್ಯತೆಯಿದೆ’ ಎಂದು ತಿಳಿಸಿದರು.

‘ಹಣಕಾಸು ಇಲಾಖೆಯ ಅನುಮತಿ ದೊರೆತ ಕೂಡಲೇ ಪರಿಹಾರ ವಿತರಣೆಯಲ್ಲಿ ಆಗಿರುವ ವ್ಯತ್ಯಾಸವನ್ನುತಕ್ಷಣ ಸರಿಪಡಿಸಲಾಗುವುದು. ಅಗತ್ಯವಿದ್ದರೆ ಈಗಾಗಲೇ ನೀಡಿರುವ ಮೊತ್ತದೊಂದಿಗೆ ಎರಡನೇ ಕಂತಿನ ಹಣವನ್ನು ಸೇರಿಸಿ ₹3,000 ಅಥವಾ ₹3,500 ನೀಡುವ ಬಗ್ಗೆಯೂ ಪರಿಶೀಲಿಸಲಾಗುವುದು. ಯಾದಗಿರಿ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಬರ ಪರಿಹಾರ ವಿತರಣೆ ಪ್ರಕ್ರಿಯೆ ಆರಂಭಿಸಲಾಗಿದ್ದು, ಇದೀಗ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು. ಯಾವ ರೈತನಿಗೂ ಅನ್ಯಾಯವಾಗಲು ಬಿಡುವುದಿಲ್ಲ’ ಎಂದೂ ಪರಮೇಶ್ವರ ಹೇಳಿದರು.

ಮುಂದಿನ ವರ್ಷ ವಿಶ್ವ ಕನ್ನಡ ಸಮ್ಮೇಳನ

‘ಎತ್ತಿನಹೊಳೆ ಯೋಜನೆ ಅನುಷ್ಠಾನಗೊಳಿಸಲು ಸಿದ್ದರಾಮಯ್ಯ ಅವರಿಗೆ ಪ್ರೇರಣೆ ನೀಡಿದವರಲ್ಲಿ ಮೊಯಿಲಿ ಪ್ರಮುಖರು. ಅವರಿಗೆ ಜ್ಞಾನಪೀಠ ಲಭಿಸಲಿ’ ಎಂದು ಆಶಿಸಿದರು. ಇದಕ್ಕೆ ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ಕೂಡ ಧ್ವನಿಗೂಡಿಸಿದರು.‌

‘ಗಾಂಧಿ ಭಾರತ ಬಿಡುಗಡೆಗೆ ಸಿದ್ಧ’: ‘ನಾನು ನೀರಾವರಿ ಸಚಿವನಾಗಿದ್ದ ಸಂದರ್ಭದಲ್ಲಿ ಒಂದಷ್ಟು ಅನುಭವಗಳನ್ನು ಆಧರಿಸಿ ‘ನೀರಿನ ಹೆಜ್ಜೆ’ ಪುಸ್ತಕ ಬರೆದು ಸಿದ್ದರಾಮಯ್ಯ ಅವರಿಂದ ಬಿಡುಗಡೆ ಮಾಡಿಸಿದ್ದೆ. ಮಹಾತ್ಮ ಗಾಂಧೀಜಿ ಅವರ ನೂರು ವರ್ಷಗಳ ಇತಿಹಾಸ ಮತ್ತು ಬೆಳಗಾವಿಯಲ್ಲಿ ನಡೆದ ಗಾಂಧಿ ಭಾರತ ಕಾರ್ಯಕ್ರಮದ ಕುರಿತು ಮತ್ತೊಂದು ಪುಸ್ತಕ ಸಿದ್ಧಪಡಿಸಿದ್ದು, ಸೂಕ್ತ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುವುದು’ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

261112-51-296220412