ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ‘ಮೋದಿ ಕಾ ಬಾಪ್ ಭೀ ಜಾಯೇಗಾ’ (ಮೋದಿಯ ಅಪ್ಪನೂ ಹೋಗಬೇಕಾಗುತ್ತದೆ) ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಕೆಲವೇ ದಿನಗಳ ಬಳಿಕ, ತಮ್ಮ ಕೊನೆಯ ಉಸಿರಿರುವವರೆಗೂ ದೇಶದ ಜನರ ಸೇವೆ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಗುಜರಾತ್ನ ಬನಸ್ಕಾಂಠಾ ಜಿಲ್ಲೆಯ ಭಿಲ್ಡಿಯಲ್ಲಿ ದೇಶೀಯ ಜಾನುವಾರು ಸಂತಾನೋತ್ಪತ್ತಿ ಮತ್ತು ಸಂಶೋಧನಾ ಕೇಂದ್ರವನ್ನು ಉದ್ಘಾಟಿಸಿದ ಬಳಿಕ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಜನಸೇವೆಯ ಬಗ್ಗೆ ತಮ್ಮ ಬದ್ಧತೆ ಅಚಲವಾಗಿರಲಿದೆ ಎಂದು ಹೇಳಿದರು.
‘ಜೀವನದ ಕೊನೆಯ ಕ್ಷಣದವರೆಗೂ ಜನರ ಸೇವೆಯಲ್ಲಿ ತೊಡಗಿರುತ್ತೇನೆ’ ಎಂದು ಹೇಳಿದರು.
'ಕೃಷಿ ನಮ್ಮ ಸಂಸ್ಕೃತಿ, ಅದನ್ನು ತಂತ್ರಜ್ಞಾನದೊಂದಿಗೆ ಬೆಸೆದಿದ್ದೇವೆ': ಪ್ರಧಾನಿ ಮೋದಿ; Videoಪ್ರತಿಪಕ್ಷಗಳ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಅವರು, ದೇಶ ಸಂಕಷ್ಟ ಎದುರಿಸುತ್ತಿರುವಾಗ ಕೆಲವರು ಅದರಲ್ಲಿ ಸಂತೋಷ ಕಾಣುತ್ತಿದ್ದಾರೆ. ತಮ್ಮ ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ವದಂತಿಗಳನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದರು.
ಇರಾನ್ ಯುದ್ಧ ಆರಂಭವಾದ ಬಳಿಕ ರೈತರಿಗೆ ರಸಗೊಬ್ಬರದ ಕೊರತೆ ಎದುರಾಗಲಿದೆ ಹಾಗೂ ಜನರಿಗೆ ಅಡುಗೆ ಅನಿಲ ಸಿಲಿಂಡರ್ಗಳು ಸಿಗುವುದಿಲ್ಲ ಎಂಬ ವದಂತಿಗಳನ್ನು ಹರಡಲಾಯಿತು ಎಂದು ದೂರಿದರು.
ರೈತರ ಕಲ್ಯಾಣಕ್ಕೆ ತಮ್ಮ ಸರ್ಕಾರ ಆದ್ಯತೆ ನೀಡಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ರಸಗೊಬ್ಬರಗಳ ಬೆಲೆ ಏರಿಕೆಯ ಹೊರೆಯನ್ನು ರೈತರ ಮೇಲೆ ಬೀಳದಂತೆ ನೋಡಿಕೊಂಡಿದೆ ಎಂದು ಮೋದಿ ಹೇಳಿದರು.
ದೇಶಕ್ಕೆ ಸಂಕಷ್ಟ ಬಂದಾಗ ಅವರಿಗೆ ಖುಷಿಯಾಗುತ್ತದೆ; ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ; Video‘ಜಾಗತಿಕ ಅನಿಶ್ಚಿತತೆಯ ನಡುವೆ ರಸಗೊಬ್ಬರಗಳ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆಯಾಯಿತು. ಆದರೆ, ನಮ್ಮ ಸರ್ಕಾರ ಆ ಬೆಲೆ ಏರಿಕೆಯ ಹೊರೆಯನ್ನು ರೈತರ ಮೇಲೆ ಬೀಳಲು ಅವಕಾಶ ನೀಡಲಿಲ್ಲ’ ಎಂದು ತಿಳಿಸಿದರು.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ಕೇಂದ್ರ ಸರ್ಕಾರವು ಸಣ್ಣ ರೈತರಿಗೆ 4.5 ಲಕ್ಷ ಕೋಟಿ ರೂಪಾಯಿ ಆರ್ಥಿಕ ನೆರವು ವಿತರಿಸಿದೆ ಎಂದು ಹೇಳಿದರು.
ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಈ ಪ್ರದೇಶದಲ್ಲಿ 14 ಸಾವಿರ ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

