ತುಮಕೂರು, ನವೆಂಬರ್​​ 15: ತುಮಕೂರಿನಲ್ಲಿ ನಡೆದ ಎಲ್ಇಡಿ ಪರದೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿ ಹುದ್ದೆಗೆ ಹತ್ತಿರ ಬಂದು ತಪ್ಪಿ ಹೋಗಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ತಮ್ಮ ಸುದೀರ್ಘ ರಾಜಕೀಯ ಪಯಣದ ಅನುಭವಗಳನ್ನು ಹಂಚಿಕೊಂಡ ಡಿಸಿಎಂ, ಅಧಿಕಾರ ಶಾಶ್ವತವಲ್ಲ, ಮಾಡಿದ ಕೆಲಸ ಶಾಶ್ವತ ಎಂದು ಅಭಿಪ್ರಾಯಪಟ್ಟಿದ್ದಾರೆ. ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ಅನೇಕ ಏಳುಬೀಳುಗಳನ್ನು ನೋಡಿದ್ದೇನೆ. 1989ರಲ್ಲಿ ಈ ಜಿಲ್ಲೆಯಿಂದ ಶಾಸಕರಾಗಿ ಆಯ್ಕೆಯಾದಾಗ, ವಿದೇಶದಿಂದ ಓದಿ ಬಂದ ತಮಗೆ ರಾಜಕಾರಣ ಆಗ ಹೊಸತು. ಅಂದಿನಿಂದ ಇಲ್ಲಿಯವರೆಗೂ ಅನೇಕ ಬಾರಿ ಉನ್ನತ ಹುದ್ದೆಗಳು ಹತ್ತಿರ ಬಂದು ತಪ್ಪಿ ಹೋದ ಸಂದರ್ಭಗಳನ್ನೂ ಅನುಭವಿಸಿದ್ದೇನೆ. ಆದರೆ ಜನತೆಯ ಆಶೀರ್ವಾದದಿಂದ ಶಾಸಕರಾಗಿ, ಹಲವು ಖಾತೆಗಳನ್ನು ನಿಭಾಯಿಸಿ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ . ಈ ರಾಜ್ಯದ ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಜನ ನೀಡಿದ್ದು, ಎರಡನೇ ಬಾರಿಗೆ ಉಪಮುಖ್ಯಮಂತ್ರಿಯಾಗಿರೋದಾಗಿ ಅವರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.