ಬೆಂಗಳೂರು: ‘ಪರಿಶಿಷ್ಟ ಪಂಗಡಗಳ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸಲು ಫಾಸ್ಟ್ ಫುಡ್ ಟ್ರಕ್ ಟ್ರೈಲರ್ ಅಥವಾ ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್ ಆರಂಭಿಸಲು ಪರಿಶಿಷ್ಟ ಪಂಗಡಗಳ ಇಲಾಖೆಯ ನಿಗಮಗಳ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಅವಕಾಶ ಕಲ್ಪಿಸಲಾಗಿದೆ’ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ. ರಘುಮೂರ್ತಿ ತಿಳಿಸಿದ್ದಾರೆ.
‘ಈ ಯೋಜನೆಯಡಿ ಘಟಕ ವೆಚ್ಚದ ಶೇ 75ರಷ್ಟು ಅಥವಾ ಗರಿಷ್ಠ ₹4 ಲಕ್ಷ ಸಹಾಯಧನ ನೀಡಲಾಗುವುದು. ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಪರಿಶಿಷ್ಟ ಪಂಗಡ ಸಮುದಾಯದವರ ಆರ್ಥಿಕ ಸಬಲೀಕರಣ ಉದ್ದೇಶದಿಂದ ಈ ಯೋಜನೆ ಆರಂಭಿಸಲಾಗುತ್ತಿದೆ.ಸಾವಿರಾರು ಮಂದಿಗೆ ಯೋಜನೆ ನೆರವಾಗಲಿದೆ’ ಎಂದು ಅವರು ಹೇಳಿದ್ದಾರೆ.
ಈ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಿಂದ ಸಾಲ ಸೌಲಭ್ಯ ಒದಗಿಸಲು ಹಾಗೂ ಸಹಾಯ ಧನ ನೀಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಕಾರ್ಯದರ್ಶಿ ಎಂ. ಕನಗವಲ್ಲಿ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಅಶೋಕ್ ಡಿ.ಆರ್. ಮಾಹಿತಿ ನೀಡಿದ್ದಾರೆ.
261116-4-2030546548

