ಬೆಂಗಳೂರು: ಬೆಲೆ ಏರಿಕೆ ವಿರುದ್ಧ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ನ.23ರಿಂದ 25ರವರೆಗೆ ಬಿಜೆಪಿ ಪ್ರತಿಭಟನೆ ಹಮ್ಮಿಕೊಳ್ಳುತ್ತಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯಸಚೇತಕ ಎನ್. ರವಿಕುಮಾರ್, ‘ತಹಶೀಲ್ದಾರ್ ಕಚೇರಿಗಳಿಗೆ ತೆರಳಿ ಮನವಿ ಸಲ್ಲಿಸಲಾಗುವುದು’ ಎಂದರು.
‘ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಬಿಜೆಪಿ ಸರ್ಕಾರ ಇದ್ದಾಗ ಶೇ 40 ಕಮಿಷನ್ ಆರೋಪ ಮಾಡಿದ್ದರು. ಆರೋಪ ಸಾಬೀತು ಮಾಡಲಾಗಲಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ಶೇ 60 ಕಮೀಷನ್ ಆರೋಪ ಬಂದಿದೆ. ಗುತ್ತಿಗೆದಾರರೇ ಆರೋಪ ಮಾಡುತ್ತಿದ್ದಾರೆ. ಅಧಿವೇಶನದಲ್ಲೂ ಈ ವಿಷಯಗಳ ಬಗ್ಗೆ ಚರ್ಚೆ ನಡೆದಿದೆ. ಬೆಳಗಾವಿ ಅಧಿವೇಶನದಲ್ಲೂ ಬೆಲೆ ಏರಿಕೆ ವಿರುದ್ಧ ಧ್ವನಿ ಎತ್ತಲಾಗುವುದು’ ಎಂದರು.
‘ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಕೇಂದ್ರ ಸರ್ಕಾರದ ವಿರುದ್ಧ ಫೋನ್ ಕದ್ದಾಲಿಕೆ ಆರೋಪ ಮಾಡುತ್ತಿದ್ದಾರೆ. ಯಾರು ಕದ್ದಾಲಿಕೆ ಮಾಡುತ್ತಿದ್ದಾರೆ ಎಂಬ ದಾಖಲೆಯನ್ನು ಇಬ್ಬರೂ ಬಿಡುಗಡೆ ಮಾಡಲಿ’ ಎಂದು ಆಗ್ರಹಿಸಿದರು.
261117-51-924916535

