ಬೆಂಗಳೂರು: ಪ್ರತಿಯೊಬ್ಬರಿಗೂ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ಸಕಾಲದಲ್ಲಿ ದೊರೆಯಬೇಕು. ಇಲಾಖೆಯ ಯೋಜನೆಗಳು ಮತ್ತು ಕಾರ್ಯಕ್ರಮ ಗಳು ಯಾವುದೇ ಅಡೆತಡೆಯಿಲ್ಲದೆ ಜನ ಸಾಮಾನ್ಯರಿಗೆ ತಲುಪಬೇಕು. ಈ ನಿಟ್ಟಿನಲ್ಲಿ ಕಾಲಮಿತಿಯೊಳಗೆ ಯೋಜನೆಗಳನ್ನು ಅನುಷ್ಠಾನ ಗೊಳಿಸಿ’ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ಸೂಚಿಸಿದರು.
ಆರೋಗ್ಯಸೌಧದಲ್ಲಿ ಮಂಗಳವಾರ ನಡೆದಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಗಳಲ್ಲಿ ವೈದ್ಯಕೀಯ ಸೇವೆ ಗಳಿಗೆ ಸಂಬಂಧಿಸಿದಂತೆ ಯಾವುದೇ ಕೊರತೆ ಅಥವಾ ಸಮಸ್ಯೆಗಳಿದ್ದರೆ ತಕ್ಷಣವೇ ಇಲಾಖೆಯ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು. ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುವಲ್ಲಿ ವಿಳಂಬವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಪ್ರತಿಯೊಂದು ಕಾರ್ಯಕ್ರಮವು ಜಿಲ್ಲಾವಾರು ಯಾವ ಹಂತದಲ್ಲಿದೆ, ಅದರ ಅನುಷ್ಠಾನದಲ್ಲಿ ಆಗಿರುವ ಪ್ರಗತಿ ಹಾಗೂ ಎದುರಾಗಿರುವ ಸಮಸ್ಯೆಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಉತ್ತಮವಾಗಿ ಕಾರ್ಯನಿರ್ವಹಿಸಿರುವ ಜಿಲ್ಲೆಗಳ ಲ್ಲಿನ ಮಾದರಿಗಳನ್ನು ಇತರೆ ಜಿಲ್ಲೆಗಳಲ್ಲಿಯೂ ಅಳವಡಿಸಿಕೊಳ್ಳುವ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಅಭಿಯಾನ ನಿರ್ದೇಶಕರು, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
261118-4-1926519807

