ಬೆಂಗಳೂರು: ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮದ ತನಿಖೆನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು, ಕರ್ನಾಟಕ ಲೋಕಸೇವಾ ಆಯೋಗವು 2023–24ರ ಅವಧಿಯಲ್ಲಿ ನಡೆಸಿದ್ದ ಗ್ರಾಮೀಣಾಭಿವೃದ್ಧಿ ಇಲಾಖೆಯ ಎಂಜಿನಿಯರ್ಗಳ ನೇಮಕಾತಿ ಪ್ರಕ್ರಿಯೆಗೂ ತನಿಖೆಯನ್ನು ವಿಸ್ತರಿಸಿದೆ.
24 ಎಂಜಿನಿಯರ್ಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದರು. ಪಶುವೈದ್ಯಾಧಿಕಾರಿ ನೇಮಕಾತಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆಯೋಗದ ಹಿಂದಿನ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ ಮತ್ತು ಆಯೋಗದ ಹಿಂದಿನ ಪರೀಕ್ಷಾ ನಿಯಂತ್ರಕರಾಗಿದ್ದ ಘ್ಯಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ಇ.ಡಿ ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎಂದು ಗೊತ್ತಾಗಿದೆ.
ತಮ್ಮ ಅಧಿಕಾರದ ಅವಧಿಯಲ್ಲಿಯೇ ಗ್ರಾಮೀಣಾಭಿವೃದ್ಧಿ ಇಲಾಖೆಯ ಎಂಜಿನಿಯರ್ಗಳ ನೇಮಕಾತಿ ನಡೆದಿದೆ ಎಂದು ಇಬ್ಬರು ಆರೋಪಿಗಳೂ ಒಪ್ಪಿಕೊಂಡಿದ್ದಾರೆ. ಆದರೆ ಅಕ್ರಮ ನಡೆದಿರುವ ಬಗ್ಗೆಆಗಲೀ, ಅಕ್ರಮದ ಸ್ವರೂಪವಾಗಲೀ ತಮಗೆ ಗೊತ್ತಿಲ್ಲ ಎಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆಯೋಗದ ಕಚೇರಿಯಲ್ಲಿ ನಡೆಸಿದ್ದ ಶೋಧದ ವೇಳೆ ಈ ನೇಮಕಾತಿ ಪ್ರಕ್ರಿಯೆಯೆ ದಾಖಲೆ ಪತ್ರಗಳು ಮತ್ತು ಒಎಂಆರ್ ಶೀಟ್ಗಳು ಲಭ್ಯವಾಗಿದ್ದವು. ಒಎಂಆರ್ ಶೀಟ್ಗಳನ್ನು ತಿರುಚಿರುವುದು ಪತ್ತೆಯಾಗಿದ್ದು, ಅದರ ಆಧಾರದಲ್ಲಿ ತನಿಖೆ ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿವೆ.
261118-51-1381108608

