ಬೆಂಗಳೂರು: ಇಂದಿನ ಪತ್ರಿಕೋದ್ಯಮದಲ್ಲಿ ಹೊಣೆಗಾರಿಕೆ ಕಡಿಮೆಯಾಗಿದೆ. ಜನಪ್ರಿಯತೆ ಮುಖ್ಯವಾಗಿದೆ. ಈ ಎರಡರ ನಡುವೆ ಸಮತೋಲನ ಅಗತ್ಯ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಸಹಯೋಗದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಪತ್ರಿಕೋದ್ಯಮವು ಜನರಿಗೆ ತ್ವರಿತ ಮಾಹಿತಿಯನ್ನು ನೀಡುತ್ತಿದೆ. ಜೊತೆಗೆ ತಪ್ಪು ಸುದ್ದಿಗಳ ಮೂಲಕ ವ್ಯಕ್ತಿತ್ವಗಳನ್ನೇ ನಾಶಮಾಡುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಮಾತನಾಡಿ, ‘ಪತ್ರಿಕೋದ್ಯಮವು ಪಾರದರ್ಶಕತೆ ಮತ್ತು ಜವಾಬ್ದಾರಿಯನ್ನು ಕಾಪಾಡಿಕೊಳ್ಳುವ ಜೊತೆಗೆ, ಇಂದಿನ ಡಿಜಿಟಲ್ ಹಾಗೂ ಕೃತಕ ಬುದ್ಧಿಮತ್ತೆ ಯುಗದಲ್ಲಿ ಮಾಧ್ಯಮಗಳು ಇನ್ನಷ್ಟು ಎಚ್ಚರಿಕೆ ವಹಿಸಬೇಕು’ ಎಂದು ಸಲಹೆ ನೀಡಿದರು.

ಪತ್ರಕರ್ತರಾದ ಎಸ್.ಆರ್. ರಾಮಕೃಷ್ಣ, ಪಂಕಜ್ ಪಚೌರಿ, ಸುದರ್ಶನ್ ಚನ್ನಂಗಿಹಳ್ಳಿ, ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಗಳಾದ ಮಂಜುನಾಥ.ಜೆ, ಆಯುಕ್ತ ಶರತ್, ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ಎನ್. ಎಸ್. ಮಹೇಶ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಉಪಸ್ಥಿತರಿದ್ದರು

261118-4-674566893