ದಾವಣಗೆರೆ: ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆ ನಡೆಸದೇ ಭದ್ರಾ ನಾಲೆಗಳಿಗೆ ನೀರು ಹರಿಸಿರುವುದನ್ನು ವಿರೋಧಿಸಿ ರಾಜೀನಾಮೆಗೆ ಮುಂದಾಗಿದ್ದ ಹೊನ್ನಾಳಿ ಶಾಸಕ ಡಿ.ಜಿ. ಶಾಂತನಗೌಡ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆಯ ಮೇರೆಗೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
‘ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದೆ. ಗುರುವಾರ ಮಧ್ಯಾಹ್ನ 1ಕ್ಕೆ ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆ ಕರೆಯುವ ಆಶ್ವಾಸನೆಯನ್ನು ಮುಖ್ಯಮಂತ್ರಿ ನೀಡಿದ್ದಾರೆ. ಹೀಗಾಗಿ, ರಾಜೀನಾಮೆ ಪತ್ರವನ್ನು ಹಿಂಪಡೆದಿದ್ದೇನೆ’ ಎಂದು ಶಾಸಕ ಜಿ.ಡಿ. ಶಾಂತನಗೌಡ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
‘ಸಭೆಯಲ್ಲಿ ರೈತ ಪರ ತೀರ್ಮಾನ ಕೈಗೊಳ್ಳುವ ವಿಶ್ವಾಸವಿದೆ. ಇದಕ್ಕೆ ಭದ್ರಾ ಜಲಾಶಯ ಅಚ್ಚುಕಟ್ಟು ವ್ಯಾಪ್ತಿಯ ಎಲ್ಲ ಶಾಸಕರ ಸಹಮತ ಪಡೆಯುತ್ತೇವೆ. ರೈತರು ಆತಂಕಪಡುವ ಅಗತ್ಯವಿಲ್ಲ’ ಎಂದು ತಿಳಿಸಿದ್ದಾರೆ.
261119-43-1901927359

