ನವದೆಹಲಿ, ನವೆಂಬರ್ 20: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಹಿರಿಯೂರು ಉಪಚುನಾವಣೆ ಸೇರಿದಂತೆ ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ. ಹಿರಿಯೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಅವಕಾಶ ನೀಡುವಂತೆ ಕುಮಾರಸ್ವಾಮಿ ಅವರು ಅಮಿತ್ ಶಾ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಹಿರಿಯೂರಿನಲ್ಲಿ ಜೆಡಿಎಸ್ ಉತ್ತಮ ಅವಕಾಶ ಹೊಂದಿದೆ ಎಂಬುದನ್ನು ಅವರು ವಿವರಿಸಿದ್ದಾರೆ ಎಂಬದು ತಿಳಿದುಬಂದಿದೆ. ಶೀಘ್ರದಲ್ಲೇ ಅಭ್ಯರ್ಥಿ ಆಯ್ಕೆ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಕುಮಾರಸ್ವಾಮಿಗೆ ಅಮಿತ್ ಶಾ ಭರವಸೆ ನೀಡಿದ್ದಾರೆ. ಈ ಸಂಬಂಧ ಅಭ್ಯರ್ಥಿ ಅಂತಿಮಗೊಳಿಸುವ ಮೊದಲು ಮಾಜಿ ಪ್ರಧಾನಿ ಹಾಗೂ ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡರೊಂದಿಗೆ ಚರ್ಚಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.
ಮುಂಬರುವ ಚುನಾವಣೆಗಳಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಎಂಪಿ ಮತ್ತು ಎಂಎಲ್ಸಿ ಚುನಾವಣೆಗಳಂತೆ ಮೈತ್ರಿ ಧರ್ಮವನ್ನು ಪಾಲಿಸಿ ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕು ಎಂದು ಅಮಿತ್ ಶಾ ಹೇಳಿರುವುದು ಗೊತ್ತಾಗಿದೆ. ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಕಾರ್ಯತಂತ್ರ ರೂಪಿಸುವ ಕುರಿತು ಇಬ್ಬರೂ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

