ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಹಿರಿಯೂರು ಉಪಚುನಾವಣೆ ಸೇರಿದಂತೆ ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ.
ಹಿರಿಯೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಅವಕಾಶ ನೀಡುವಂತೆ ಕುಮಾರಸ್ವಾಮಿ ಅವರು ಅಮಿತ್ ಶಾ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಹಿರಿಯೂರಿನಲ್ಲಿ ಜೆಡಿಎಸ್ ಉತ್ತಮ ಅವಕಾಶ ಹೊಂದಿದೆ ಎಂಬುದನ್ನು ಅವರು ವಿವರಿಸಿದ್ದಾರೆ ಎಂಬದು ತಿಳಿದುಬಂದಿದೆ.
ಶೀಘ್ರದಲ್ಲೇ ಅಭ್ಯರ್ಥಿ ಆಯ್ಕೆ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಕುಮಾರಸ್ವಾಮಿಗೆ ಅಮಿತ್ ಶಾ ಭರವಸೆ ನೀಡಿದ್ದಾರೆ. ಈ ಸಂಬಂಧ ಅಭ್ಯರ್ಥಿ ಅಂತಿಮಗೊಳಿಸುವ ಮೊದಲು ಮಾಜಿ ಪ್ರಧಾನಿ ಹಾಗೂ ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡರೊಂದಿಗೆ ಚರ್ಚಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.
ನವದೆಹಲಿಯಲ್ಲಿ ಇಂದು ನಮ್ಮ ಪಕ್ಷದ ಹಿರಿಯ ನಾಯಕರು, ದೇಶದ ಸುರಕ್ಷತೆ ಹಾಗೂ ಪಕ್ಷ ಸಂಘಟನೆಯ ಬಲವರ್ಧನೆಗಾಗಿ ಸದಾ ತಮ್ಮನ್ನು ಸಮರ್ಪಿಸಿಕೊಂಡಿರುವ ದಿಟ್ಟ ನೇತಾರ, ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಸನ್ಮಾನ್ಯ ಶ್ರೀ ಅಮಿತ್ ಶಾ ಜೀ ಅವರನ್ನು ಭೇಟಿ ಮಾಡಲಾಯಿತು.
— Vijayendra Yediyurappa (@BYVijayendra) November 19, 2026
ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ವಿದ್ಯಾವಂತ ಮತದಾರರು ಪಕ್ಷಕ್ಕೆ… pic.twitter.com/PpmWGn97EY
New Delhi
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) November 19, 2026
Held a cordial meeting with the Hon'ble Union Home Minister, Shri @AmitShah avaru, and conducted a comprehensive discussion on the political developments in Karnataka.
On this occasion, the Hon'ble Minister received a briefing on the Hiriyur Assembly by-election… pic.twitter.com/PoPA71HMqt
ಹಿರಿಯೂರು ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಲಭ್ಯವಿರುವ ವರದಿಗಳು, ಮಾಹಿತಿಗಳನ್ನೆಲ್ಲಾ ಪರಿಶೀಲಿಸಿ ಒಮ್ಮತದ ತೀರ್ಮಾನ ಕೈಗೊಳ್ಳೋಣ ಎಂಬುದಾಗಿ ಅಮಿತ್ ಶಾ ಅವರು ಉಭಯ ನಾಯಕರಿಗೆ ತಿಳಿಸಿದ್ದಾರೆ ಎಂದು ಗೊತ್ತಾಗಿದೆ.
ಹಿರಿಯೂರು ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ, ಜೆಡಿಎಸ್ ನಡುವೆಯೇ ಪೈಪೋಟಿ ಸೃಷ್ಟಿಯಾಗಿದ್ದು, ಮೈತ್ರಿಕೂಟದಲ್ಲಿಗೊಂದಲಕ್ಕೆ ಕಾರಣವಾಗಿತ್ತು. ಇದು ಮುಂದುವರಿದರೆ ಮೈತ್ರಿ ಪಕ್ಷಗಳಿಂದ ಒಗ್ಗಟ್ಟಿನ ಸ್ಪರ್ಧೆಗೆ ಹಿನ್ನಡೆಯಾಗುವ ಆತಂಕದ ಮಾತುಗಳು ಕೇಳಿಬಂದಿದ್ದವು. ಈ ನಡುವೆಯೇ ಅಮಿತ್ ಶಾ ಅವರನ್ನು ಉಭಯ ನಾಯಕರು ಭೇಟಿಯಾಗಿ ಚರ್ಚಿಸುವ ಮೂಲಕ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ಮುಂಬರುವ ಚುನಾವಣೆಗಳಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಎಂಪಿ ಮತ್ತು ಎಂಎಲ್ಸಿ ಚುನಾವಣೆಗಳಂತೆ ಮೈತ್ರಿ ಧರ್ಮವನ್ನು ಪಾಲಿಸಿ ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕು ಎಂದು ಅಮಿತ್ ಶಾ ಹೇಳಿರುವುದು ಗೊತ್ತಾಗಿದೆ. ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಕಾರ್ಯತಂತ್ರ ರೂಪಿಸುವ ಕುರಿತು ಇಬ್ಬರೂ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.

