ಬೆಂಗಳೂರು, ಅಕ್ಟೋಬರ್ 30: ಕರ್ನಾಟಕ ರಾಜ್ಯೋತ್ಸವ ಆಚರಣೆಗಳು ಮತ್ತು ಪ್ರಶಸ್ತಿ ವಿತರಣೆಯ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಬಾರಿ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಗುವುದು. ಪ್ರತಿಯೊಬ್ಬ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡಿ, ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿಗಳ ಕುರಿತು ಮಾತನಾಡಿದ ಡಿಕೆ ಶಿವಕುಮಾರ್, ಹಿಂದಿನ ವರ್ಷಗಳಲ್ಲಿ ನೀಡಿದಂತೆಯೇ ಈ ಬಾರಿಯೂ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದರು. ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ಅವರ ಹೆಸರನ್ನು ಪ್ರಶಸ್ತಿಗೆ ಸಮಿತಿಯಿಂದ ತೆರವುಗೊಳಿಸಲಾಗಿತ್ತು. “ವಾಟಾಳ್ ನಾಗರಾಜ್ ಅವರಿಗೆ ಪ್ರಶಸ್ತಿ ನೀಡಬೇಕು ಎಂದು ನಮಗೂ ಆಸೆ ಇತ್ತು. ಅವರು ಸಾಕಷ್ಟು ಹೋರಾಟ ಮಾಡಿದ್ದಾರೆ. ಆದರೆ, ಅವರು ಪ್ರಶಸ್ತಿ ಬೇಡ ಎಂದು ಹೇಳಿದ್ದಾರೆ. ಹಿಂದೆಯೂ ಅವರು ಪ್ರಶಸ್ತಿಯನ್ನು ನಿರಾಕರಿಸಿದ್ದರು, ಈಗಲೂ ಬೇಡ ಎಂದಿದ್ದಾರೆ” ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ