ದಾವಣಗೆರೆ, ಅಕ್ಟೋಬರ್ 30: ಮನೆಯ ಕಾಂಪೌಂಡ್ ಬಳಿ ನಿಲ್ಲಿಸಿದ್ದ ಇನೋವಾ ಕಾರನ್ನು ಕಳ್ಳರು ಕದ್ದೊಯ್ದಿರುವ ಘಟನೆ ದಾವಣಗೆರೆ ನಗರದ ಭೂಮಿಕಾ ನಗರದಲ್ಲಿ ನಡೆದಿದೆ. ನವೆಂಬರ್ 12ರಂದು ಬೆಳಿಗ್ಗೆ ಸುಮಾರು 5 ಗಂಟೆಗೆ ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಕಳ್ಳರು ಬೆಳಗಿನ ಜಾವ ಕದ್ದುಕೊಂಡು ಪರಾರಿಯಾಗಿದ್ದಾರೆ. ಭೂಮಿಕಾ ನಗರದ ಎಸ್ಎಸ್ ಆಸ್ಪತ್ರೆ ರಸ್ತೆಯಲ್ಲಿರುವ ಆಯುರ್ವೇದ ವೈದ್ಯ ಡಾ. ಜಗದೀಶ್ ಮನೆ ಮುಂದೆ ಈ ಘಟನೆ ನಡೆದಿದೆ.
ಇನ್ನು, ದಾವಣಗೆರೆಯ ಇದೇ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರು ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಕಳೆದ ಎರಡು ತಿಂಗಳಲ್ಲಿ ಭೂಮಿಕಾ ನಗರ, ಸರಸ್ವತಿ ನಗರ, ಜಯನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒಟ್ಟು ಐದು ಕಾರುಗಳು ಕಳ್ಳತನವಾಗಿವೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

