ಬೆಂಗಳೂರು, ನವೆಂಬರ್ 24: ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಕಳೆದ ಎಂಟು ದಿನಗಳಿಂದ ಆಶಾ ಕಾರ್ಯಕರ್ತೆಯರು ತಮ್ಮ ಮಕ್ಕಳೊಂದಿಗೆ ರಸ್ತೆ ಮತ್ತು ಫುಟ್ಪಾತ್ಗಳ ಮೇಲೆ ಮಲಗಿ ಹೋರಾಟ ನಡೆಸುತ್ತಿದ್ದಾರೆ. ಮಾಸಿಕ ₹15,000 ವೇತನ ಹೆಚ್ಚಳಕ್ಕಾಗಿ ಆಗ್ರಹಿಸಿರುವ ಕಾರ್ಯಕರ್ತೆಯರು, ಪ್ರಸ್ತುತ ಸಿಗುತ್ತಿರುವ ₹8,000 ಗೌರವಧನ ಜೀವನ ನಿರ್ವಹಣೆಗೆ ಸಾಕಾಗುತ್ತಿಲ್ಲ ಎಂದು ಹೇಳಿದ್ದಾರೆ. ಬೆಲೆ ಏರಿಕೆ ಕಾರಣದಿಂದಾಗಿ ಈ ಗೌರವಧನದಲ್ಲಿ ಸಂಸಾರ ನಿಭಾಯಿಸುವುದು ಕಷ್ಟವಾಗಿದೆ, ಮಕ್ಕಳ ಶಿಕ್ಷಣ, ಆರೋಗ್ಯ ವೆಚ್ಚಗಳನ್ನು ಭರಿಸುವುದು ಅಸಾಧ್ಯವಾಗಿದೆ ಎಂದು ಆಶಾ ಕಾರ್ಯಕರ್ತೆಯರು ಅಳಲು ತೋಡಿಕೊಂಡಿದ್ದಾರೆ.
‘ಸತ್ತರೂ ಸರಿಯೆ, ಸರ್ಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸುವವರೆಗೂ ಹೋರಾಟ ಕೈಬಿಡುವುದಿಲ್ಲ’ ಎಂದು ಅವರು ಪಟ್ಟು ಹಿಡಿದಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸ್ಥಳಕ್ಕೆ ಬಂದು ಲಿಖಿತ ಪತ್ರದ ಮೂಲಕ ಭರವಸೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಸಿಎಂ ವಿದೇಶ ಪ್ರವಾಸದಿಂದ ಹಿಂದಿರುಗಿದ ನಂತರ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಆಶಾ ಕಾರ್ಯಕರ್ತೆಯರ ಮುಂದಿನ ಹೆಜ್ಜೆ ನಿಂತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

