ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಲಾಗಿರುವ ಆಪ್ಟಿಕಲ್ ಫೈಬರ್ ಕೇಬಲ್ಗಳನ್ನು (ಒಎಫ್ಸಿ) ಮುಂದುವರಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ.
ಅಧಿಕಾರಿಗಳ ಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ನಗರದಲ್ಲಿ ಸುಮಾರು 12,000 ಕಿ.ಮೀ.ನಷ್ಟು ಅಕ್ರಮ ಭೂಗತ ಕೇಬಲ್ಗಳಿರುವುದು ವರದಿಯಾಗಿದೆ. ಅಲ್ಲದೆ, 3,460 ಕಿ.ಮೀ. ಕೇಬಲ್ಗಳು ಮರಗಳ ಮೇಲೆ ನೇತಾಡುತ್ತಿವೆ. ಈ ಸಮಸ್ಯೆಯನ್ನು ಬಗೆಹರಿಸಲು ಗುತ್ತಿಗೆದಾರರೊಂದಿಗೆ ಚರ್ಚಿಸಿ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅನಧಿಕೃತ ಕೇಬಲ್ಗಳನ್ನು ಘೋಷಿಸಿ, ಒಂದು ಬಾರಿ ಶುಲ್ಕ ಪಾವತಿಸಿ ಸಕ್ರಮಗೊಳಿಸಿಕೊಳ್ಳಲು ಕಾಲಾವಕಾಶ ನೀಡಬೇಕು. ನಂತರವೂ ಸಕ್ರಮಗೊಳಿಸದ ಮತ್ತು ಅಪಾಯಕಾರಿಯಾಗಿ ನೇತಾಡುವ ಕೇಬಲ್ಗಳನ್ನು ನಿರ್ದಾಕ್ಷಿಣ್ಯವಾಗಿ ಕತ್ತರಿಸಿ ತೆರವುಗೊಳಿಸಬೇಕು’ ಎಂದು ನಿರ್ದೇಶಿಸಿದ್ದಾರೆ.
ಒಎಫ್ಸಿ ಕೇಬಲ್ ಅಳವಡಿಕೆಗೆ ಸಂಬಂಧಿಸಿದಂತೆ ನಗರ ಪಾಲಿಕೆಗಳ ಸಾಫ್ಟ್ವೇರ್ ಮೂಲಕ ಅರ್ಜಿ ಸಲ್ಲಿಸುವ ಸಂಸ್ಥೆಗಳಿಗೆ ಅನುಮತಿ ನೀಡುವ ಸಂದರ್ಭದಲ್ಲಿ ನಿಗದಿತ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದರು.
261125-4-1010807550

