ಬೆಂಗಳೂರು, ನವೆಂಬರ್ 25: ರಾಜ್ಯದ ಹವಾಮಾನದಲ್ಲಿ ಬದಲಾವಣೆ ಮುಂದುವರಿದಿದ್ದು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ನವೆಂಬರ್ 26ರವರೆಗೆ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈಗಾಗಲೇ ದಕ್ಷಿಣ ಒಳನಾಡಿನ ಬೆಂಗಳೂರು ಸೇರಿದಂತೆ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವಾಮಾನ ಮುಂದುವರಿದಿದೆ. ಇದೇ ವೇಳೆ, ರಾಜ್ಯದ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ನಿರೀಕ್ಷೆಯಿಲ್ಲ. ಆದರೆ ಕನಿಷ್ಠ ತಾಪಮಾನದಲ್ಲಿ ಏರಿಕೆಯಾಗುವ ಪ್ರವೃತ್ತಿ ಕಂಡುಬರಲಿದೆ ಎಂದು ಮುನ್ಸೂಚನೆ ತಿಳಿಸಿದೆ.

ನವೆಂಬರ್ 25ರಂದು ಎಲ್ಲೆಲ್ಲಿ ಮಳೆ?

ನವೆಂಬರ್ 25ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬಹುತೇಕ ಒಣ ಹವಾಮಾನ ಇರಲಿದೆ.

ನವೆಂಬರ್ 26ರಂದು ಮಳೆ ಮುನ್ಸೂಚನೆ

ನವೆಂಬರ್ 26ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಒಣ ಹವಾಮಾನ ಇರಲಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲೂ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ದಿಢೀರ್ ಮಳೆರಾಯನ ಎಂಟ್ರಿ: ಸಂಜೆ ವೇಳೆ ರಸ್ತೆಗಿಳಿದ ವಾಹನ ಸವಾರರು ತತ್ತರ

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬಹುತೇಕ ಒಣ ಹವಾಮಾನ ಇರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ