ಬೆಂಗಳೂರು: ‘ಸಂವಿಧಾನದ ಆಶಯಗಳನ್ನು ಎತ್ತಿಹಿಡಿದು, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಹೇಳಿದರು.

ಸಂವಿಧಾನದ ದಿನಾಚರಣೆ ಅಂಗವಾಗಿ ಗುರುವಾರ, ವಿಧಾನಸೌಧದ ಆವರಣ ದಲ್ಲಿರುವ ಬಿ.ಆರ್‌.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು. ‘ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕರಿಗೂ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯದ ಹಕ್ಕುಗಳನ್ನು ಕಲ್ಪಿಸುವ ಮೂಲಕ ಪ್ರಜಾಪ್ರಭುತ್ವದ ಅಡಿಪಾಯವನ್ನು ಬಲಿಷ್ಠಗೊಳಿಸಿದೆ. ಅಂಬೇಡ್ಕರ್‌ ಅವರ ದೂರದೃಷ್ಟಿ ಮತ್ತು ಸಾಮಾಜಿಕ ನ್ಯಾಯದ ಪರಿಕಲ್ಪನೆಗಳು ಇಂದಿಗೂ ದೇಶಕ್ಕೆ ದಾರಿದೀಪವಾಗಿವೆ’ ಎಂದರು.

ಅದಕ್ಕೂ ಮುನ್ನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ವಿಧಾನ ಪರಿಷತ್‌ ಸಭಾಧ್ಯಕ್ಷ ಸಲೀಂ ಅಹಮದ್‌, ಸಚಿವ ಕೆ.ಎಚ್‌.ಮುನಿಯಪ್ಪ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಉಪಸ್ಥಿತರಿದ್ದರು.

ನಂತರ ನಡೆದ ಕಾರ್ಯಕ್ರಮದಲ್ಲಿ ವಿಧಾನಸೌಧದ ಸಚಿವಾಲಯದ ಅಧಿಕಾರಿಗಳಿಗೆ ಶಾಲಿನಿ ರಜನೀಶ್‌ ಅವರು ಸಂವಿಧಾನದ ಪ್ರಸ್ತಾವನೆ ಬೋಧಿಸಿದರು.

261127-4-815903195