ಉಡುಪಿ, ನವೆಂಬರ್ 27: ಉಡುಪಿ ಜಿಲ್ಲೆಯು ಶಿಕ್ಷಣದಲ್ಲಿ ಮುಂದುವರಿದ ಜಿಲ್ಲೆಯಾಗಿದ್ದು, ಅತಿ ಹೆಚ್ಚು ಸುಶಿಕ್ಷಿತರನ್ನು ಹೊಂದಿದೆ. ಆದರೂ, ಕಳೆದ ಐದು ವರ್ಷಗಳಿಂದ ಜಿಲ್ಲೆಯಲ್ಲಿ ಸೈಬರ್ ವಂಚನೆ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚಾಗುತ್ತಿವೆ. ವಿಶೇಷವಾಗಿ ಹಿರಿಯ ನಾಗರಿಕರೇ ಸೈಬರ್ ಕದೀಮರ ಸುಲಭ ಗುರಿಯಾಗಿದ್ದಾರೆ. ನಿವೃತ್ತ ಬ್ಯಾಂಕ್ ಅಧಿಕಾರಿಗಳು ಮತ್ತು ಉನ್ನತ ಹುದ್ದೆಗಳಿಂದ ನಿವೃತ್ತರಾದವರನ್ನು ಗುರಿಯಾಗಿಸಿಕೊಂಡು, ಅವರ ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ವಂಚಕರು ದೋಚುತ್ತಿದ್ದಾರೆ. ವಂಚಕರು ನಕಲಿ ಲಿಂಕ್‌ಗಳನ್ನು ಕಳುಹಿಸುವುದು, ಗಿಫ್ಟ್ ಹ್ಯಾಂಪರ್‌ಗಳ ಆಮಿಷವೊಡ್ಡುವಂತಹ ತಂತ್ರಗಳನ್ನು ಬಳಸುತ್ತಿದ್ದಾರೆ. ಒಂದು ಸೆಕೆಂಡ್‌ನಲ್ಲಿ ಲಿಂಕ್ ತೆರೆಯುವುದರಿಂದಲೇ ಹಣ ಕಳೆದುಕೊಳ್ಳುವ ಘಟನೆಗಳು ನಡೆಯುತ್ತಿವೆ. ಈ ಬಗ್ಗೆ ಪೊಲೀಸ್ ಇಲಾಖೆ ಕಾರ್ಯಾಗಾರಗಳು, ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಿದ್ದರೂ, ಸೈಬರ್ ವಂಚನೆ ಪ್ರಕರಣಗಳು ಕಡಿಮೆಯಾಗಿಲ್ಲ. ಹೀಗಾಗಿ ಹಿರಿಯ ನಾಗರಿಕರ ಮನೆಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಲು ಮತ್ತು ಮೊಬೈಲ್ ಬಳಕೆ ಬಗ್ಗೆ ಎಚ್ಚರಿಕೆ ನೀಡಲು ಉಡುಪಿ ಎಸ್ಪಿ ವಿಶೇಷ ಯೋಜನೆ ರೂಪಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

