ಬೆಂಗಳೂರು: ‘ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸದಸ್ಯರ ಸಂಖ್ಯೆಯನ್ನು 10 ಲಕ್ಷಕ್ಕೆ ಹೆಚ್ಚಿಸುವ ಸಂಕಲ್ಪ ಮಾಡಲಾಗಿದೆ ಎಂದು ಸಭಾದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಮಹಾಸಭಾದ ಅಧಿಕೃತ ಅಂತರ್ಜಾಲ ತಾಣ www.aivlm.orgಗೆ ಚಾಲನೆ ನೀಡಿ ಮಾತನಾಡಿದ ಅವರು, ‘1904ರಲ್ಲಿ ಶ್ರೀ ಹಾನಗಲ್ ಕುಮಾರಸ್ವಾಮಿ ಅವರು ಸ್ಥಾಪಿಸಿದ ಮಹಾಸಭಾದಲ್ಲಿ ಒಂದು ಸಾವಿರ ಸದಸ್ಯರಿದ್ದರು, ಭೀಮಣ್ಣ ಖಂಡ್ರೆ ಅವರು ಸದಸ್ಯರ ಸಂಖ್ಯೆಯನ್ನು ಲಕ್ಷ ದಾಟಿಸಿದರು’ ಎಂದರು.
‘ಇಂದಿನ ಯುಗಮಾನದ ಅಗತ್ಯಕ್ಕೆ ಅನುಗುಣವಾಗಿ ಅಂತರ್ಜಾಲ ತಾಣ ಅಭಿವೃದ್ಧಿ ಪಡಿಸಲಾಗಿದೆ. ಸಮುದಾಯದ ಯುವಜನರು ಹೆಚ್ಚಾಗಿ ಸದಸ್ಯರಾಗುವಂತೆ ಪೋತ್ಸಾಹಿಸಲು, ಆನ್ಲೈನ್ ಮೂಲಕವೂ ಸದಸ್ಯತ್ವ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಶಾಸಕ ಗಣೇಶ್ ಹುಕ್ಕೇರಿ, ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿ, ಮಹಿಳಾ ಘಟಕದ ರಾಷ್ಟ್ರೀಯ ಅಧ್ಯಕ್ಷೆ ವೀಣಾ ಕಾಶಪ್ಪನವರ್, ಯುವ ಘಟಕದ ಅಧ್ಯಕ್ಷ ವೆಂಕಟರೆಡ್ಡಿ ಪಾಟೀಲ ಉಪಸ್ಥಿತರಿದ್ದರು.
261031-51-1793748457

