ಬೆಂಗಳೂರು: ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ಅವರ ವಿರುದ್ಧದ ‘ಸ್ಟಿಂಗ್’ ಕಾರ್ಯಾಚರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಿದರೂ ಉತ್ತರ ನೀಡದ ಕಾರಣ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಕೃಪಾ ಆಳ್ವ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

‘ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ನಡೆಯುತ್ತಿರುವ ಪ್ರಚಾರ ಮತ್ತು ಪ್ರತಿಕ್ರಿಯೆಗಳಿಂದ ಪಕ್ಷಕ್ಕೆ ಮುಜುಗರವಾಗಿದೆ. ಈ ಘಟನೆಯಲ್ಲಿ ತಾವು ಭಾಗಿಯಾಗಿದ್ದೀರಿ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಆದರೆ ಈವರೆಗೂ ಉತ್ತರ ಅಥವಾ ಸಮಜಾಯಿಷಿ ನೀಡಿಲ್ಲ’ ಎಂದು ಕೆಪಿಸಿಸಿ ಉಪಾಧ್ಯಕ್ಷ ಕೆ.ನಾರಾಯಣಸ್ವಾಮಿ ಉಚ್ಚಾಟನೆ ಆದೇಶದಲ್ಲಿ ತಿಳಿಸಿದ್ದಾರೆ.

‘ಪ್ರಕರಣದಲ್ಲಿ ಹೆಸರು ಕೇಳಿ ಬಂದಿರುವುದರಿಂದ ಮತ್ತು ನಿಮ್ಮ ನಡವಳಿಕೆಯು ಪಕ್ಷ ವಿರೋಧಿ ಚಟುವಟಿಕೆ ಆಗಿರುವುದರಿಂದ ಅಧ್ಯಕ್ಷರ ಸೂಚನೆ ಮೇರೆಗೆ ಆರು ವರ್ಷಗಳವರೆಗೆ ಉಚ್ಚಾಟನೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.

261031-51-1687860885