ಬೆಂಗಳೂರು: ‘ಬೆಳಗಾವಿ ಅಧಿವೇಶನ ಮುಕ್ತಾಯ ಆಗುವುದರೊಳಗೆ ಕೇಂದ್ರ ಸರ್ಕಾರವು ಬರ ನಷ್ಟಕ್ಕೆ ಪರಿಹಾರ ನೀಡದೇ ಇದ್ದರೆ, ದೆಹಲಿ ಚಲೋ ನಡೆಸಲಾಗುವುದು’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜತೆ ಶನಿವಾರ ಅವರು ಮಾತನಾಡಿದರು.

‘ರಾಜ್ಯದಲ್ಲಿ ಬರದಿಂದ ಎಷ್ಟು ನಷ್ಟವಾಗಿದೆ ಮತ್ತು ಎಷ್ಟು ಪರಿಹಾರ ಬೇಕಾಗುತ್ತದೆ ಎಂಬ ವಿವರಗಳೊಂದಿಗೆ ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಪತ್ರ ಬರೆಯಲಾಗಿದೆ. ಕೇಂದ್ರದ ಬರ ಅಧ್ಯಯನ ತಂಡವೂ ರಾಜ್ಯಕ್ಕೆ ಬಂದು, ಅಧ್ಯಯನ ನಡೆಸಿ ವರದಿ ನೀಡಿದೆ. ಆದರೆ ಈವರೆಗೆ ಒಂದು ರೂಪಾಯಿ ಪರಿಹಾರವೂ ಬಿಡುಗಡೆಯಾಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಕೇಂದ್ರವು ಪರಿಹಾರ ನೀಡದಿದ್ದರೆ ಸುಪ್ರೀಂ ಕೋರ್ಟ್‌ಗೆ ಹೋಗುತ್ತೀರಾ’ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, ‘ಖಂಡಿತವಾಗಿಯೂ ಹೋಗುತ್ತೇವೆ’ ಎಂದು ಉತ್ತರಿಸಿದರು.

‘ಬರ ಪರಿಹಾರ ಕುರಿತು ಚರ್ಚೆಗೆ ಸರ್ವ‍ ಪಕ್ಷ ನಿಯೋಗ ಬರುತ್ತೇವೆ, ಸಮಯ ಕೊಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಲವು ಬಾರಿ ಕೇಳಿಕೊಂಡಿದ್ದೇನೆ. ಆದರೆ, ಸಮಯ ನೀಡಿಲ್ಲ. ಪರಿಹಾರ ನೀಡದೇ ಇದ್ದರೆ, ಅನಿವಾರ್ಯವಾಗಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲೇಬೇಕಾಗುತ್ತದೆ’ ಎಂದರು.

–ಡಿ.ಕೆ.ಶಿವಕುಮಾರ್‌, ಮುಖ್ಯಮಂತ್ರಿನಮ್ಮ ರಾಜ್ಯ ಮತ್ತು ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ಕನ್ನಡ ಬಾವುಟಕ್ಕೆ ಮಾನ್ಯತೆ ನೀಡುವ ವಿಚಾರವನ್ನು ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು